ಆ ಜಾತಿ ಈ ಜಾತಿಯವರೆನಬೇಡ.
ಹದಿನೆಂಟುಜಾತಿಯೊಳಗಾವ ಜಾತಿಯಾದಡೂ ಆಗಲಿ,
ಗುರು ಕಾರುಣ್ಯವ ಪಡೆದು, ಅಂಗದ ಮೇಲೆ ಲಿಂಗವ ಧರಿಸಿ,
ಪುನರ್ಜಾತರಾದ ಬಳಿಕ, ಭಕ್ತರಾಗಲಿ ಜಂಗಮವಾಗಲಿ,
ಗುರುವಿನ ವೇಷವಿದ್ದವರ ಗುರುವೆಂದು ನಂಬಿ,
ದಾಸೋಹವ ಮಾಡುವುದೆ ಸದಾಚಾರ.
ಗುರುವನತಿಗಳೆದು, ಗುರುವಾಜ್ಞೆಯ ಮೀರಿ,
ಗುರು ಕೊಟ್ಟ ಪಂಚಮುದ್ರೆಗಳ ಮೇಲೆ
ಅನ್ಯಸಮಯ ಮುದ್ರೆಯ ಲಾಂಛನಾಂಕಿತರಾಗಿ,
ಗುರುದ್ರೋಹಿಗಳಾಗಿ ಬಂದವರ
ಜಂಗಮವೆಂದು ಕಂಡು, ನಮಸ್ಕರಿಸಿ ಆರಾಧಿಸಿ,
ಪ್ರಸಾದವ ಕೊಂಡವಂಗೆ ನಾಯಕನರಕ ತಪ್ಪದೆಂದ
ಕಲಿದೇವಯ್ಯ.
ಕಲ್ಯಾಣದ ಅನುಭವ ಮಂಟಪ
ಉಡಿಯ ಲಿಂಗವ ಬಿಟ್ಟು,
ಗುಡಿಯ ಲಿಂಗಕ್ಕೆ ಶರಣೆಂಬ
ಮತಿಭ್ರಷ್ಟರನೇನೆಂಬೆನಯ್ಯಾ
ಕಲಿದೇವರದೇವ.
ಊರ ಕಲ್ಲಿಗೆ ಉರದ ಲಿಂಗವಡಿಯಾಗಿ ಬೀಳುವ
ಕ್ರೂರಕರ್ಮಿಗಳೆನೇನೆಂಬೆನಯ್ಯಾ ಕಲಿದೇವಯ್ಯ.
ಎತ್ತೆತ್ತ ನೋಡಿದಡೆ ಅತ್ತತ್ತ ಬಸವನೆಂಬ ಬಳ್ಳಿ.
ಎತ್ತಿ ನೋಡಿದಡೆ ಲಿಂಗವೆಂಬ ಗೊಂಚಲು.
ಒತ್ತಿ ಹಿಂಡಿದಡೆ ಭಕ್ತಿಯೆಂಬ ರಸವಯ್ಯಾ.
ಆಯತ ಬಸವಣ್ಣನಿಂದ, ಸ್ವಾಯತ ಬಸವಣ್ಣನಿಂದ.
ಸನ್ನಹಿತವು ಬಸವಣ್ಣನಿಂದ,
ಗುರು ಬಸವಣ್ಣನಿಂದ, ಲಿಂಗ ಬಸವಣ್ಣನಿಂದ.
ಜಂಗಮ ಬಸವಣ್ಣನಿಂದ.
ಪಾದೋದಕ ಬಸವಣ್ಣನಿಂದ, ಪ್ರಸಾದ ಬಸವಣ್ಣನಿಂದ.
ಅತ್ತ ಬಲ್ಲಡೆ ನೀವು ಕೇಳಿರೆ, ಇತ್ತ ಬಲ್ಲಡೆ ನೀವು ಕೇಳಿರೆ.
ಬಸವಾ ಬಸವಾ ಬಸವಾ ಎಂದು ಮಜ್ಜನಕ್ಕೆರೆಯದವನ ಭಕ್ತಿ,
ಶೂನ್ಯ ಕಾಣಾ, ಕಲಿದೇವರದೇವಾ.
ಎನಗೆ ಶಿವ ತಾನೀತ ಬಸವಣ್ಣನು
ಮರ್ತ್ಯಲೋಕವನು ಪಾವನವ ಮಾಡುವಲ್ಲಿ.
ಎನಗೆ ಗುರು ತಾನೀತ ಬಸವಣ್ಣನು
ಎನ್ನ ಭವರೋಗವ ಛೇದಿಸಿ ಭಕ್ತನೆನಿಸುವಲ್ಲಿ.
ಎನಗೆ ಲಿಂಗ ತಾನೀತ ಬಸವಣ್ಣನು
ಘನವಿಸ್ತಾರವಪ್ಪ ನಿಜಮಹಿಮೆಯುಳ್ಳಲ್ಲಿ.
ಎನಗೆ ಜಂಗಮ ತಾನೀತ ಬಸವಣ್ಣನು
ಅನಾದಿಸಂಸಿದ್ಧ ಘನಪ್ರಸಾದರೂಪನಾದಲ್ಲಿ.
ಎನ್ನ ನಿಂದ ನಿಲುಕಡೆಯೀತ ಬಸವಣ್ಣನು
ಎನ್ನ ಸರ್ವಸ್ವಾಯತವ ಮಾಡಿ ಸಲಹುವಲ್ಲಿ.
ಇದು ಕಾರಣ, ಕಲಿದೇವರದೇವರು ಸಾಕ್ಷಿಯಾಗಿ
ಎನ್ನ ಪೂರ್ವಾಚಾರಿ ಸಂಗನಬಸವಣ್ಣನ
ಕರುಣದಿಂದಲಾನು ಬದುಕಿದೆನು.
ಗುರು ಕೊಟ್ಟ ಲಿಂಗ ತನ್ನ ಕರಸ್ಥಲದಲ್ಲಿರುತಿರಲು,
ಧರೆಯ ಮೇಲೆ ಪ್ರತಿಷ್ಠಿಸಿದ ಭವಿಶೈವದೈವ,
ತೀರ್ಥಕ್ಷೇತ್ರಂಗಳಿಗೆ ಹರಿದುಹೋಗುವ ಪರವಾದಿಗಳಿಗೆ
ಅಘೋರನರಕ ತಪ್ಪದೆಂದ, ಕಲಿದೇವಯ್ಯ.
ಬಸವಣ್ಣನ ನೆನೆವುದೆ ಷೋಡಶೋಪಚಾರ.
ಬಸವಣ್ಣನ ನೆನೆವುದೆ ಪರಮತತ್ವ.
ಬಸವಣ್ಣನ ನೆನೆವುದೆ ಮಹಾನುಭಾವ.
ಕಲಿದೇವಾ, ನಿಮ್ಮ ಶರಣ ಬಸವಣ್ಣನ ನೆನೆದು,
ಸಮಸ್ತಗಣಂಗಳೆಲ್ಲರೂ ಅತಿಶುದ್ಧರಾದರಯ್ಯ.
ಬಸವಣ್ಣ ಮಾಡಲಿಕೆ ಗುರುವಾಯಿತ್ತು.
ಬಸವಣ್ಣ ಮಾಡಲಿಕೆ ಲಿಂಗವಾಯಿತ್ತು.
ಬಸವಣ್ಣ ಮಾಡಲಿಕೆ ಜಂಗಮವಾಯಿತ್ತು.
ಬಸವಣ್ಣ ಮಾಡಲಿಕೆ ಪ್ರಸಾದವಾಯಿತ್ತು.
ಬಸವಣ್ಣ ಮಾಡಲಿಕೆ ಈರೇಳುಲೋಕವಾಯಿತ್ತು.
ಬಸವಣ್ಣನಿಂದಾದ ಕಲಿದೇವಯ್ಯ.
ಮೂಲ: ಆನ್ಲೈನ್ ಹಾಗೂ ಇತರ ಮೂಲಗಳಿಂದ ಸಂಗ್ರಹಿ ರಚಿಸಲಾಗಿದೆ
ಹದಿನೆಂಟುಜಾತಿಯೊಳಗಾವ ಜಾತಿಯಾದಡೂ ಆಗಲಿ,
ಗುರು ಕಾರುಣ್ಯವ ಪಡೆದು, ಅಂಗದ ಮೇಲೆ ಲಿಂಗವ ಧರಿಸಿ,
ಪುನರ್ಜಾತರಾದ ಬಳಿಕ, ಭಕ್ತರಾಗಲಿ ಜಂಗಮವಾಗಲಿ,
ಗುರುವಿನ ವೇಷವಿದ್ದವರ ಗುರುವೆಂದು ನಂಬಿ,
ದಾಸೋಹವ ಮಾಡುವುದೆ ಸದಾಚಾರ.
ಗುರುವನತಿಗಳೆದು, ಗುರುವಾಜ್ಞೆಯ ಮೀರಿ,
ಗುರು ಕೊಟ್ಟ ಪಂಚಮುದ್ರೆಗಳ ಮೇಲೆ
ಅನ್ಯಸಮಯ ಮುದ್ರೆಯ ಲಾಂಛನಾಂಕಿತರಾಗಿ,
ಗುರುದ್ರೋಹಿಗಳಾಗಿ ಬಂದವರ
ಜಂಗಮವೆಂದು ಕಂಡು, ನಮಸ್ಕರಿಸಿ ಆರಾಧಿಸಿ,
ಪ್ರಸಾದವ ಕೊಂಡವಂಗೆ ನಾಯಕನರಕ ತಪ್ಪದೆಂದ
ಕಲಿದೇವಯ್ಯ.
ವೀರನಿಷ್ಠೆಯ ಶರಣನೀತ. ವಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನ 'ದೇವರ ಹಿಪ್ಪರಗಿಯಲ್ಲಿ' ಪರುವತಯ್ಯ -ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೆವರು. ದೇವರ ಹಿಪ್ಪರಿಗೆ ಈತನ ಜನ್ಮಸ್ಥಳ. ಕಾರ್ಯಕ್ಷೇತ್ರ ಕಲ್ಯಾಣ. ಆರಾಧ್ಯದೈವ ಕಲ್ಲಿನಾಥ. ಕಾವ್ಯ ಪುರಾಣಗಳಲ್ಲಿ ಈತನನ್ನು ವೀರಭದ್ರನ ಅವತಾರವೆಂದು ಬಣ್ಣಿಸಲಾಗಿದೆ. ಶಾಸನ ಶಿಲ್ಪಗಳಲ್ಲಿಯೂ ಇವನಿಗೆ ಎಡೆ ಲಭಿಸಿದೆ. ಶರಣರ ಬಟ್ಟೆಗಳನ್ನು ತೊಳೆಯುವುದು (ಶುಚಿ ಮಾಡುವುದು) ಈತನ ಕಾಯಕ. ಮಡಿವಾಳ ಮಾಚಿದೇವರ ಬಗ್ಗೆ ಹಲವು ಐತಿಹ್ಯಗಳು ಪ್ರಚಾರದಲಿ ಇವೆ. ಅವುಗಳಲ್ಲಿ ಕೆಲವು-
ನುಲಿಯ ಚಂದಯ್ಯ ತನ್ನ ಕಾಯಕಕ್ಕೆ ಬೇಕಾದ ಹುಲ್ಲನ್ನು ಕೆರೆಯಲ್ಲಿ ಕುಯ್ಯುತ್ತಿದ್ದಾಗ ಧರಿಸಿದ 'ಇಷ್ಟ ಲಿಂಗ' ಜಾರಿ ಕೆರೆಯೊಳಗೆ ಬೀಳುತ್ತದೆ. ಜಾರಿ ಬಿದ್ದ ಲಿಂಗ ಮತ್ತೇಕೆ? ಭಾವ ಲಿಂಗವೊಂದನ್ನೇ ಪೂಜಿಸಿದರೆ ಸಾಕೆಂದು ಹುಲ್ಲಿನ ಹೊರೆ ಹೊತ್ತು ಮನೆಗೆ ಮರಳುವನು. ಆಗ ಲಿಂಗದೇವ, ಮಾಚಿದೇವರ ಮೊರೆ ಹೋಗುತ್ತಾನೆ. ಮಾಚಿ ತಂದೆಗಳು 'ಸವಿ ಬೇಕು- ಹಣ್ಣು ಬೇಡವೆಂದರೆ' ಹೇಗೆ? ಗುರು ಪೂಜೆ ಅರಿದೊಡೆ ಲಿಂಗ ಪೂಜೆ ಬಿಡಲಾಗದೆಂದು ಚಂದ್ರಯ್ಯನವರ ತಪ್ಪಿನ ಅರಿವನ್ನುಂಟುಮಾಡುವರು.
'ಬೇಡುವ ಭಕ್ತರಿಲ್ಲದೆ ಬಡವನಾದೆನೆಂಬ' ಬಸವಣ್ಣನವರು 'ಅಹಂ' ಭಾವನೆಯಿಂದ ಮಾತನಾಡಿರುತ್ತಾರೆ, ಆಗ ಮಾಚಿದೆವರು ಬಸವಣ್ಣನವರಿಗೆ 'ನೀವೊಬ್ಬರೇ ದಾನ ಮಾಡಲು ಹುಟ್ಟಿದ ದಾನಿಗಳು, ಉಳಿದೆಲ್ಲ ಭಕ್ತರು ಭಿಕಾರಿಗಳು, ದರಿದ್ರರೆ' ? ಎಂದು ಪ್ರಶ್ನಿಸುತ್ತಾರೆ. ಮುಂದೆ ಎನ್ನ ಬಡತನದ ಇರವ ನಿನಗೆ ತೋರುವೆನೆಂದು ಪಾದದಿಂದ ನೀರನ್ನು ಚಿಮ್ಮಲು ಆ ನೀರು ಹನಿಗಳೆಲ್ಲ ಮುತ್ತು ರತ್ನಗಳಾದವು. ಹೀಗೆ ವಿನಯ, ಇಂದ್ರಿಯ ನಿಗ್ರಹ, ನಿರಹಂಕಾರಗಳು ಭಕ್ತಿಯ ಕುರುಹು ಎಂದು ತಿಳಿಸುತ್ತ ಅಹಂಕಾರ ನಿರ್ಮೂಲನೆಗೊಳಿಸಿದ.
ಮತ್ತೊಂದು ಸಂದರ್ಭದಲ್ಲಿ ಮೇದರ ಕೇತಯ್ಯ ಬಿದಿರು ಕಡಿಯುವಾಗ ಕೆಳಗೆ ಬೀಳುತ್ತಾನೆ. ಎದೆಗೆ ಬಿದಿರು ಮೊಳೆ ಚುಚ್ಚಿ ಕೇತಯ್ಯ ಶಿವ ಸನ್ನಿಧಿ ಸೇರುತ್ತಾನೆ. ಆಗ ಬಸವಣ್ಣ ಮಾಚಯ್ಯನನ್ನು ಕರೆಸುವನು, ಮಾಚಯ್ಯ ಬಂದು ಶಿವಶರಣರ ಪ್ರಾಣವೇ ತನ್ನ ಪ್ರಾಣವೆಂದು ನಂಬಿದ ಬಸವಣ್ಣ ಇನ್ನೂ ಜೀವಂತವಾಗಿದ್ದು ತನ್ನ ವಚನ ಪಾಲಿಸಿಲ್ಲವೆಂದ. ಇದನ್ನರಿತ ಬಸವಣ್ಣ ಪ್ರಾಣ ಬಿಡುವನು. ಆ ಪ್ರಾಣ ಕೇತಯ್ಯನನ್ನು ಹಿಂಬಾಲಿಸುತ್ತದೆ. ಬಸವಣ್ಣನ ನಿಷ್ಠೆ ಮೆಚ್ಚಿದ ಮಾಚಯ್ಯ, ಶಿವನನ್ನು ಕುರಿತು ಕೆರಳಿ ನುಡಿದು 'ಇಬ್ಬರ' ಪ್ರಾಣಗಳನ್ನು ಶಿವನಿಂದ ಮರಳಿ ಪಡೆದನೆಂದು ತಿಳಿದು ಬರುತ್ತದೆ.
ಅವತಾರ ಪುರುಷ
ದಕ್ಷನನ್ನು ಸಂಹಾರ ಮಾಡಿ ಅತಿ ಉತ್ಸಾಹದಿಂದ ಶಿವನನ್ನು ಕಾಣಲು ವೀರಭದ್ರ ಶಿವನ ಸಭೆಯೊಳಗೆ ನಡೆದು ಬರುತ್ತಾನೆ. ಸಭೆಯಲ್ಲಿರುವ ಶಿವ ಭಕ್ತನಿಗೆ ಈತನ ಉತ್ತರೀಯ ಸೆರಗು ತಾಕುತ್ತದೆ. ವಿಜಯದ ಉದ್ವೇಗದಲ್ಲಿ ಆದ ಆ ತಪ್ಪಿಗೆ, ಭೂಲೋಕದಲ್ಲಿ ಮಡಿವಾಳನಾಗಿ ಜನಿಸಿ ಶರಣರ ವಸ್ತ್ರಗಳನ್ನು ಮಡಿ ಮಾಡುವ ಕಾಯಕ ಪೂರೈಸಿ ದೋಷ ಮುಕ್ತನಾಗಿ ಬರುವಂತೆ ಶಿವನ ಆದೇಶವಾಗುತ್ತದೆ. ಮಾಚಿದೇವರನ್ನು ವೀರ ಭದ್ರನ 'ದೇವಾಂಶ ಸಂಭೂತ ಅವತಾರ ಪುರುಷನೆಂದು' ನಿರೂಪಿಸುವುದು ಸಾಮಾನ್ಯ ರೂಢಿಯಾಗಿದೆ.
ಮಾಚಯ್ಯ ಹುಟ್ಟಿನಿಂದಲೂ ಮಡಿವಾಳನಾಗಿದ್ದು, ಅಚಲ ಕಾಯಕ ನಿಷ್ಟನಾಗಿದ್ದ, ಹಿಮಾಲಯದಷ್ಟು ಧೃಢನಾಗಿದ್ದ, ತನ್ನ ಕಾಯಕವೇ ಭಕ್ತಿ, ಜೀವನದುಸಿರು ಎಂದು ನಂಬಿದ್ದ. ಜಂಗಮ ವೇಷದಲ್ಲಿ ಬಂದ ಶಿವನ ಬಟ್ಟೆಗಳನ್ನು ಆತನ ಷರತ್ತಿನ ಮೇರೆಗೆ ತನ್ನ ಹೆಂಡತಿ 'ಮಲ್ಲಿಗೆಮ್ಮಳ' ಎದೆ ಬಗೆದ ರಕ್ತದಲ್ಲಿ ಒಗೆದು ಒಣಗಿಸಿಕೊಂಡು ಬಂದ ಸಂದರ್ಭದ ದಂತ ಕಥೆ ಹಿಮಾಚಲಕ್ಕಿಂತಲೂ ಗಟ್ಟಿ ಕಾಯಕದ ಹಿರಿಯಾಳು ಮಾಚಿದೇವನಾಗಿದ್ದ ಎಂಬುದನ್ನು ತಿಳಿಸುತ್ತದೆ.
ಶಿವಶರಣರ ಹಾಗೂ ಕಾಯಕದಲ್ಲಿ ನಿಷ್ಠೆಯುಳ್ಳ ಮೈಲಿಗೆಯ ಬಟ್ಟೆಗಳನ್ನು 'ಮಡಿ' ಮಾಡಿ ಮುಟ್ಟಿಸುವ ಕಾಯಕ ಇವರಾದಾಗಿತ್ತು. ಮಡಿ ಬಟ್ಟೆ ಹೊತ್ತುಕೊಂಡು 'ವೀರ ಘಂಟೆ' ಬಾರಿಸುತ್ತ, ಭಕ್ತರಲ್ಲದವರು ತಮ್ಮನ್ನು ಮುಟ್ಟಬಾರದೆಂದು ನಿಯಮವನ್ನು ವಿಧಿಸಿಕೊಂಡಿದ್ದರು.
ಕುಚೋದ್ಯಕ್ಕೆ ಬಂದು ಮುಟ್ಟುವ ಭವಿಗಳನ್ನು ತುಂಡರಿಸಿ ಚೆಲ್ಲುತ್ತ ಮುನ್ನಡೆಯುವುದು ಮಾಚಿದೇವರ ನಡತೆಯಾಗಿತ್ತು. ಭವಿಯೋರ್ವ ಮಡಿ ಗಂಟು ಮುಟ್ಟಿ ಮೈಲಿಗೆಗೊಳಿಸಿದ್ದಕ್ಕೆ ಆತನ ಶಿರವನ್ನು ಆಕಾಶಕ್ಕೆ ತೂರಿದ ಘಟನೆಯಿಂದಾಗಿ, ಭಕ್ತಿ ಭಾವದಿಂದ ಮಡಿವಾಳಯ್ಯನನ್ನು ಜನರು ಗೌರವಿಸುತ್ತಿದ್ದರು. ಕಾಯಕ ಮಾಡದ -ಸೋಮಾರಿಗಳ-ಬಡವರನ್ನು ಶೋಷಿಸುವ -ಸೋಮಾರಿಗಳ- ದುರ್ಗುಣವುಳ್ಳವರ ಬಟ್ಟೆಗಳನ್ನೆಂದು ಆತ ಮುಟ್ಟುತ್ತಿರಲಿಲ್ಲ. 'ಅರಸುತನ ಮೇಲಲ್ಲ-ಅಗಸತನ ಕೀಳಲ್ಲ ' ಎಂಬುದನ್ನು ಜನಕ್ಕೆ ಸಾರಿದರು.
ಕಲ್ಯಾಣದ ಅನುಭವ ಮಂಟಪ
ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ, 'ಮಡಿ' ಹಾಸಿ ಸ್ವಾಗತಿಸುವ ಕೆಲಸ ಅವರದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲವೆಂಬುದು ಮಾಚಯ್ಯನ ಮಹಾ ಘನತೆಗೆ ಸಾಕ್ಷಿಯಾಗಿದೆ.
ಹಿಪ್ಪರಿಗೆಯಿಂದ ಕಲ್ಯಾಣಕ್ಕೆ ನಡೆದು ಬರುವಾಗ ಭೀಮರತಿ ಹೊಳೆ ಪ್ರವಾಹದಿಂದ ಕಟ್ಟಿರಲು, ಹರಿಗೋಲ ಹಂಗಿಲ್ಲದೆ ಶಿವನನ್ನು ನೆನೆಯಲು ನದಿ ಇಬ್ಬಾಗವಾಯ್ತು. ಆ ಮಾರ್ಗ ಮಧ್ಯದಿಂದ ಮಾಚಿದೇವ ನಡೆದು ಬರುತ್ತಾರೆ.
ಬಿಜ್ಜಳ ತನ್ನ ಬಟ್ಟೆಯನ್ನು ಮಡಿ ಮಾಡಿಸಿಕೊಡಲು ಬಸವಣ್ಣನಿಗೆ ದುಂಬಾಲು ಬಿದ್ದ. ಮಡಿವಾಳಯ್ಯ ಪರಮ ಭಕ್ತ, ಅವನನ್ನು ಅಗಸನೆಂದು ಭಾವಿಸದಿರಲು ಬಸವಣ್ಣ ತಿಳಿ ಹೇಳಿದ, ಅದನ್ನು ಲೆಕ್ಕಿಸದೆ ಮಾಸಿದ ಬಟ್ಟೆಗಳ ಗಂಟನ್ನು ಮಡಿ ಮಾಡಲು ಕಳಿಸಿದ. ಭವಿ ಬಿಜ್ಜಳನ ಮೈಲಿಗೆ ಬಟ್ಟೆಯ ಗಂಟನ್ನು ಕಂಡ ಮಡಿವಾಳಯ್ಯ ಕೋಪಗೊಂಡು ಸಿಟ್ಟಿನಿಂದ ನೋಡಲು ಆ ಕ್ಷಣದಲ್ಲಿ ಗಂಟು ಉರಿದು ಹೋಯ್ತು.
ಇದು ಮಡಿವಾಳಯ್ಯನ 'ಅಹಂಕಾರವೆಂದು' ಭಾವಿಸಿದ ಬಿಜ್ಜಳ ಅವರನ್ನು ಸೆರೆ ಹಿಡಿದು ತರಲು ಕುಂಟ -ಕುರುಡರ ಪಡೆಯೊಂದನ್ನು ಕಳುಹಿಸಿದ. ಮಡಿವಾಳಯ್ಯ ತನ್ನ ಶಕ್ತಿಯಿಂದ ಕುರುಡರಿಗೆ ಕಣ್ಣು ಕಾಣುವಂತೆ ಮತ್ತು ಕುಂಟರಿಗೆ ಕಾಲು ಬರುವಂತೆ ಮಾಡಿ ಅಂಗ ಸೌಷ್ಟ ವರನ್ನಾಗಿ ಮಾಡಿ ಕಳುಹಿಸಿದ. ಇದರಿಂದ ಉರಿದೆದ್ದು ಬಿಜ್ಜಳ 'ಮದೋನ್ಮತ್ತ' ಆನೆಯನ್ನ ಮಾಚಯ್ಯನ ಮೇಲೆ ಹರಿ ಹಾಯಲು ಬಿಟ್ಟ. ಸೈನಿಕರ ತುಕಡಿಯೊಂದನ್ನೂ ಕಳುಹಿಸಿದ. ಆನೆ ಹಾಗೂ ಅವರನ್ನೆಲ್ಲ ಸದೆ ಬಡಿದು ಜಯ ಶಾಲಿಯಾದ (ಬಹುತೇಕ ಮಡಿವಾಳ ಬಂಧುಗಳ ಮನೆಯಲ್ಲಿ ಈ ಸನ್ನಿವೇಶದ ಫೋಟೋ ಇರುವುದು - ಆದರೆ ಬಹು ಜನರಿಗೆ ಅದರ ಹಿನ್ನೆಲೆ ಗೊತ್ತಿಲ್ಲ). ಕಾಲಾಂತರದಲ್ಲಿ ಬಿಜ್ಜಳನಿಗೆ ಮಾಚಿದೇವರ ಉನ್ನತ ಮಹಿಮೆ ತಿಳಿದು ತನ್ನ ತಪ್ಪಿನ ಅರಿವಾಗಿ ಬಿಜ್ಜಳ ಶರಣಾಗತನಾಗುವನು.
ಕಲ್ಯಾಣ ಕ್ರಾಂತಿ'ಯ ಸಂದರ್ಭದಲ್ಲಿ ಮಾಚಿದೆವರು ಹೊತ್ತ 'ಜವಾಬ್ಧಾರಿ' ಗುರುತರವಾದುದು. ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ದಂಡ ನಾಯಕತ್ವ ಜವಾಬ್ಧಾರಿ ಹೊತ್ತು, ಚನ್ನ ಬಸವಣ್ಣ, ಅಕ್ಕ ನಾಗಮ್ಮ, ಕಿನ್ನರಿ ಬೊಮ್ಮಣ್ಣ ಮೊದಲಾದವರೊಂದಿಗೆ ಮಾಚಿದೇವ ಶರಣ ಸಮೂಹದ 'ಭೀಮ ರಕ್ಷೆಯಾಗಿ' ನಿಂತರು. ಕಲಚೂರ್ಯ ರಾಯ ಮುರಾರಿಯನ್ನು ಎದುರಿಸಿ ಭೀಮ ನದಿಯನ್ನು ದಾಟಿ ತಲ್ಲೂರು, ಮುರಗೋಡ, ಕಡಕೋಳ, ತಡ ಕೋಡ, ಮೂಗ ಬಸವ, ಕಾತರವಳ್ಳಿಯಲ್ಲಿ ಅಲ್ಲಲ್ಲಿ ಕಾಳಗ ನಡೆಸಿದರು. ತಮ್ಮ ಧೈರ್ಯ, ಅನುಪಮ ಬಲದಿಂದ ಶರಣರನ್ನು, ವಚನ ಸಾಹಿತ್ಯವನ್ನು ರಕ್ಷಿಸಿದ ಸಾಹಸಿ ಮಾಚಯ್ಯ. ಉಳವಿಗೆ ಹೋಗುತ್ತಿರುವಾಗಲೆ ಮಾರ್ಗ ಮಧ್ಯದ ಮುರಗೋಡದ ಹತ್ತಿರವಿರುವ ಕಾರಿಮಣಿ (ಕಾರಿಮನೆ)ಯಲ್ಲಿ ಲಿಂಗೈಕ್ಯರಾದರು. ಇಂದಿಗೂ ಅಲ್ಲಿ ಅವರ ಗದ್ದುಗೆ ಕಾಣಬಹುದು.
ಮಡಿವಾಳ ಮಾಚಿದೇವ ಗದ್ದುಗೆ ಮುರಗೋಡದ ಹತ್ತಿರವಿರುವ ಕಾರಿಮಣಿ (ಕಾರಿಮನೆ)ಯಲ್ಲಿ 'ಕಲಿದೇವರದೇವ' ಅಂಕಿತದಲ್ಲಿ ಬರೆದ ೩೫೪ ವಚನಗಳು ಈಗ ದೊರಿತಿವೆ. ಅವುಗಳಲ್ಲಿ ಗಣಾಚಾರ ನಿಷ್ಠೆ, ಡಾಂಭಿಕತೆ, ಕರ್ಮಠತನ, ಕ್ಷುದ್ರದೈವಾರಾಧನೆ, ಸ್ಥಾವರಲಿಂಗ ಪೂಜೆಗಳನ್ನು ಕುರಿತ ನಿಷ್ಠುರ ಟೀಕೆ ಪ್ರಮುಖವಾಗಿ ಕಂಡುಬರುತ್ತದೆ.
ಉಡಿಯ ಲಿಂಗವ ಬಿಟ್ಟು,
ಗುಡಿಯ ಲಿಂಗಕ್ಕೆ ಶರಣೆಂಬ
ಮತಿಭ್ರಷ್ಟರನೇನೆಂಬೆನಯ್ಯಾ
ಕಲಿದೇವರದೇವ.
ಊರ ಕಲ್ಲಿಗೆ ಉರದ ಲಿಂಗವಡಿಯಾಗಿ ಬೀಳುವ
ಕ್ರೂರಕರ್ಮಿಗಳೆನೇನೆಂಬೆನಯ್ಯಾ ಕಲಿದೇವಯ್ಯ.
ಪಂಚಭೂತಗಳು, ಚಂದ್ರ, ಸೂರ್ಯ, ಆತ್ಮ ಇವರಾರೂ ದೈವವಲ್ಲ, ಬಸವಣ್ಣನೊಬ್ಬನೇ ದೈವವೆಂದು ಹೇಳುವಲ್ಲಿ ಬಸವಣ್ಣನೊಂದಿಗಿನ ತನ್ನ ಸಂಬಂಧವನ್ನು ಸ್ವಷ್ಟಪಡಿಸುವನು. ಒಂದು ವಚನದಲ್ಲಿ ಪರಮಾತ್ಮನನ್ನು ಸಂಭೋದಿಸುತ್ತ ನಿಮ್ಮ ಧ್ಯಾನದಲ್ಲಿರಿಸಲೊಲ್ಲದೆ ಬಸವಣ್ಣನ ಧ್ಯಾನದಲ್ಲಿರಿಸಯ್ಯ ಎಂದಿರುವನು. ಲಿಂಗವಂತನಾದಮೇಲೆ ತನ್ನ ತಂದೆ-ತಾಯಿ ಬಂಧು-ಬಳಗ, ಸುತ ಸೋದರರು-ಇವರ ಮೋಹ ಬಿಡದೆ ಶಿವಭಕ್ತಿಯ ನೆಲೆ ಸಿಕ್ಕದು ಎಂದಿರುವನು, ವೇಷಧಾರಿಗಳನ್ನು ಸೂಳೆವಾರು ಎಂದು ವ್ಯಂಗ್ಯವಾಡಿರುವನು. ಹಿಂಸೆಯನ್ನು ಮಾಡದೆ, ಯಾರನ್ನೂ ನಿಂದಿಸದೇ, ಪರ ವಸ್ತು; ಪರ ಸ್ತ್ರಿಯರನ್ನು ಬಯಸದೆ ಜೀವಿಸಬೇಕು- ಹೀಗೆ ಮಾಡಿದರೆ ದೈವತ್ವವನ್ನು ಹೊಂದುವುದು ಕಠಿಣವಲ್ಲ ಎಂದಿದ್ದಾನೆ.
ಎತ್ತೆತ್ತ ನೋಡಿದಡೆ ಅತ್ತತ್ತ ಬಸವನೆಂಬ ಬಳ್ಳಿ.
ಎತ್ತಿ ನೋಡಿದಡೆ ಲಿಂಗವೆಂಬ ಗೊಂಚಲು.
ಒತ್ತಿ ಹಿಂಡಿದಡೆ ಭಕ್ತಿಯೆಂಬ ರಸವಯ್ಯಾ.
ಆಯತ ಬಸವಣ್ಣನಿಂದ, ಸ್ವಾಯತ ಬಸವಣ್ಣನಿಂದ.
ಸನ್ನಹಿತವು ಬಸವಣ್ಣನಿಂದ,
ಗುರು ಬಸವಣ್ಣನಿಂದ, ಲಿಂಗ ಬಸವಣ್ಣನಿಂದ.
ಜಂಗಮ ಬಸವಣ್ಣನಿಂದ.
ಪಾದೋದಕ ಬಸವಣ್ಣನಿಂದ, ಪ್ರಸಾದ ಬಸವಣ್ಣನಿಂದ.
ಅತ್ತ ಬಲ್ಲಡೆ ನೀವು ಕೇಳಿರೆ, ಇತ್ತ ಬಲ್ಲಡೆ ನೀವು ಕೇಳಿರೆ.
ಬಸವಾ ಬಸವಾ ಬಸವಾ ಎಂದು ಮಜ್ಜನಕ್ಕೆರೆಯದವನ ಭಕ್ತಿ,
ಶೂನ್ಯ ಕಾಣಾ, ಕಲಿದೇವರದೇವಾ.
ಎನಗೆ ಶಿವ ತಾನೀತ ಬಸವಣ್ಣನು
ಮರ್ತ್ಯಲೋಕವನು ಪಾವನವ ಮಾಡುವಲ್ಲಿ.
ಎನಗೆ ಗುರು ತಾನೀತ ಬಸವಣ್ಣನು
ಎನ್ನ ಭವರೋಗವ ಛೇದಿಸಿ ಭಕ್ತನೆನಿಸುವಲ್ಲಿ.
ಎನಗೆ ಲಿಂಗ ತಾನೀತ ಬಸವಣ್ಣನು
ಘನವಿಸ್ತಾರವಪ್ಪ ನಿಜಮಹಿಮೆಯುಳ್ಳಲ್ಲಿ.
ಎನಗೆ ಜಂಗಮ ತಾನೀತ ಬಸವಣ್ಣನು
ಅನಾದಿಸಂಸಿದ್ಧ ಘನಪ್ರಸಾದರೂಪನಾದಲ್ಲಿ.
ಎನ್ನ ನಿಂದ ನಿಲುಕಡೆಯೀತ ಬಸವಣ್ಣನು
ಎನ್ನ ಸರ್ವಸ್ವಾಯತವ ಮಾಡಿ ಸಲಹುವಲ್ಲಿ.
ಇದು ಕಾರಣ, ಕಲಿದೇವರದೇವರು ಸಾಕ್ಷಿಯಾಗಿ
ಎನ್ನ ಪೂರ್ವಾಚಾರಿ ಸಂಗನಬಸವಣ್ಣನ
ಕರುಣದಿಂದಲಾನು ಬದುಕಿದೆನು.
ಗುರು ಕೊಟ್ಟ ಲಿಂಗ ತನ್ನ ಕರಸ್ಥಲದಲ್ಲಿರುತಿರಲು,
ಧರೆಯ ಮೇಲೆ ಪ್ರತಿಷ್ಠಿಸಿದ ಭವಿಶೈವದೈವ,
ತೀರ್ಥಕ್ಷೇತ್ರಂಗಳಿಗೆ ಹರಿದುಹೋಗುವ ಪರವಾದಿಗಳಿಗೆ
ಅಘೋರನರಕ ತಪ್ಪದೆಂದ, ಕಲಿದೇವಯ್ಯ.
ಬಸವಣ್ಣನ ನೆನೆವುದೆ ಷೋಡಶೋಪಚಾರ.
ಬಸವಣ್ಣನ ನೆನೆವುದೆ ಪರಮತತ್ವ.
ಬಸವಣ್ಣನ ನೆನೆವುದೆ ಮಹಾನುಭಾವ.
ಕಲಿದೇವಾ, ನಿಮ್ಮ ಶರಣ ಬಸವಣ್ಣನ ನೆನೆದು,
ಸಮಸ್ತಗಣಂಗಳೆಲ್ಲರೂ ಅತಿಶುದ್ಧರಾದರಯ್ಯ.
ಬಸವಣ್ಣ ಮಾಡಲಿಕೆ ಗುರುವಾಯಿತ್ತು.
ಬಸವಣ್ಣ ಮಾಡಲಿಕೆ ಲಿಂಗವಾಯಿತ್ತು.
ಬಸವಣ್ಣ ಮಾಡಲಿಕೆ ಜಂಗಮವಾಯಿತ್ತು.
ಬಸವಣ್ಣ ಮಾಡಲಿಕೆ ಪ್ರಸಾದವಾಯಿತ್ತು.
ಬಸವಣ್ಣ ಮಾಡಲಿಕೆ ಈರೇಳುಲೋಕವಾಯಿತ್ತು.
ಬಸವಣ್ಣನಿಂದಾದ ಕಲಿದೇವಯ್ಯ.
ಮೂಲ: ಆನ್ಲೈನ್ ಹಾಗೂ ಇತರ ಮೂಲಗಳಿಂದ ಸಂಗ್ರಹಿ ರಚಿಸಲಾಗಿದೆ
No comments:
Post a Comment