Followers

Friday, January 24, 2020

ಅಂಬಿಗರ ಚೌಡಯ್ಯ


ತೀಕ್ಷ್ಣ ವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಅಂಬಿಗರ ಚೌಡಯ್ಯ. ಬಸವ ಬಾನಂಗಳದಲ್ಲಿ ಶಿವಶರಣರೆಂಬ ಅಮೂಲ್ಯ ನಕ್ಷತ್ರಗಳು ಮಿನುಗಿದವು. ನಕ್ಷತ್ರಗಳಲ್ಲಿ ಧ್ರುವತಾರೆಯಂತೆ ಮಿನುಗಿದವರು ಚೌಡಯ್ಯ.

ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರು ಶರಣರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ.
ಅಂಬಿಗರ ಚೌಡಯ್ಯನ ಕಾಲ ಕ್ರಿ. . ಸುಮಾರು 1160. ಇವರು ಸುಮಾರು 330 ವಚನಗಳನ್ನು ರಚಿಸಿದ್ದಾರೆ. ಇವರು ತಮ್ಮ ವಚನಗಳಲ್ಲಿ ಯಾವ ಇಷ್ಟದೈವಕ್ಕೆ ಋಣಿಯಾಗದೆ ತನ್ನ ಹೆಸರನ್ನೇ ವಚನಗಳ ಅಂಕಿತವಾಗಿಯೂ ಬಳಸಿಕೊಂಡು ದಿಟ್ಟತನದ ಎದೆಗಾರಿಕೆಯನ್ನು ತೋರಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಶಿವಪುರದಲ್ಲಿ (ಇಂದಿನ ಚೌಡದಾನಪುರ) ಜನಿಸಿದ ಮಹಾಶಿವಶರಣರಿಗೆ ಉದ್ದಾಲಕರೆಂಬ ಗುರುಗಳು. ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ ಎಂಬ ವಚನಕ್ಕೆ ತಕ್ಕಂತೆ ಇರುವ ಧರ್ಮಪತ್ನಿ ಮತ್ತು ಪುರವಂತ ಎಂಬ ಪುತ್ರ. ಸದ್ಗುರುವಿನ ಕೃಪಾಕಟಾಕ್ಷದಿಂದ ಶ್ರೇಷ್ಠ ತತ್ವಜ್ಞಾನಿಯಾದ ಇವರು ವಚನಗಳನ್ನು ರಚಿಸಿ ಶಿವಶರಣರ ಪಂಕ್ತಿಯಲ್ಲಿ ಅಗ್ರಸ್ಥಾನಕ್ಕೇರಿದರು. ಚೌಡದಾನಪುರದಲ್ಲಿ ಪೂರ್ವ ಪಶ್ಚಿಮವಾಹಿನಿಯಾಗಿ ಹರಿಯುತ್ತಿರುವ ತುಂಗಭದ್ರಾನದಿಯಲ್ಲಿ ದೋಣಿ ಮೂಲಕ ನದಿ ದಾಟಿಸುವ ಕಾಯಕ ಮಾಡುತ್ತ ವಚನಗಳನ್ನು ರಚಿಸಿದ್ದಾರೆ. ಗುರುವಿನ ಘನಕೃಪೆಗೆ ಪಾತ್ರರಾಗಿ ಅವರ ಮೂಲಕ ಲಿಂಗಾಂಗ ಸಾಮರಸ್ಯವನ್ನರಿತು ಅಪಾರ ಪಾಂಡಿತ್ಯವನ್ನು ಗಳಿಸಿದರು. ಕಲ್ಯಾಣದ ಕೀರ್ತಿಯನ್ನು ಕೇಳಿ ಅನುಭವಮಂಟಪಕ್ಕೆ ಬಂದ ಶರಣದಂಪತಿಯನ್ನು ಶರಣ ಪ್ರಮಥರೆಲ್ಲ ಆದರದಿಂದ ಬರಮಾಡಿಕೊಂಡರಂತೆ. ಬಸವಪ್ರಭುವನ್ನು ಕಂಡು ಆನಂದಪರವಶರಾಗಿ ಭಕ್ತಿಯಿಂದ ಕೈ ಮುಗಿದ ಚೌಡಯ್ಯನವರು;

ಬಸವಣ್ಣನೇ ಭಕ್ತ ಪ್ರಭುದೇವರೇ ಜಂಗಮರು
ಇಂತೆಂಬ ಭೇದವಿಲ್ಲಯ್ಯ, ಅರಿವೇ ಗುರು,
ಗುರುವೇ ಪರಶಿವನು ಇದು ತಿಳಿದವನೇ
ಪರಂಜ್ಯೋತಿಯೆಂದ ಅಂಬಿಗರ ಚೌಡಯ್ಯ

ಎಂಬ ವಚನದ ಮೂಲಕ ಮನಸಾರೆ ಹೊಗಳಿದ್ದಾರೆ. ಶಿವಶರಣರ ಸಂಗದಲ್ಲಿ ಕಾಲಕಳೆದು ಪರಿಪಕ್ವರಾದ ಇವರು ರಚಿಸಿದ ವಚನಗಳು ಹಸಿಗೋಡೆಯಲ್ಲಿ ಹರಳು ಎಸೆದಂತಿವೆ. ಇವರ ವಚನಗಳನ್ನು ಕಂಡ ಕವಿ ಕಾವ್ಯಾನಂದರು ನಿಜದ ನಗಾರಿ ನಿರ್ಭಯತೆಯ ಭೇರಿ ಅಂಬಿಗರ ಚೌಡಯ್ಯ ಎಂದಿದ್ದಾರೆ. ಮುಪ್ಪಿನ ಷಡಕ್ಷರಿಯವರು ತಮ್ಮ ಸುಬೋಧ ಸಾಗರದಲ್ಲಿ ಅಂಬಿಗರ ಚೌಡಯ್ಯನ ಮುಂಬಾಗಿಲನ್ನು ಕಾಯುವ ನಂಬಿಗೆಯ ಸೇವಕರು ಕುಂಭಿನಿಯೊಳಗಿನ್ನು ಸರಿಯದಾರು? ಎಂದು ಹಾಡಿ ಹರಸಿದ್ದಾರೆ. ಘನಲಿಂಗದೇವನು (1480) ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯಯಿಂತಿಪ್ಪ ಶಿವಶರಣರ ಮನೆ ಬಾಗಿಲನಿಕ್ಕುವ ಸೊಣಗನ ಮಾಡಿ ಎನ್ನಿರಿಸಯ್ಯ' ಎಂದು ತಮ್ಮ ವಚನವೊಂದರಲ್ಲಿ ಹೇಳಿರುವುದೇ ಇದಕ್ಕೆ ನಿದರ್ಶನವಾಗಿದೆ. ಮಹಾಕವಿ ಷಡಕ್ಷರಿಯವರು ತಮ್ಮ ಬಸವರಾಜ ವಿಜಯದಲ್ಲಿ ನಿಡುಗುಡಿಮಾರನಂಬಿಗರ ಚೌಡಯ್ಯ ಎಂದು ಸ್ಮರಿಸಿದ್ದರೆ, ಮಹಾಲಿಂಗ ವಿರಚಿತ ಗುರುಬೋಧಾಮೃತದ ಕುಂಬಾರ ಗುಂಡಯ್ಯ, ಅಂಬಿಗರ ಚೌಡಯ್ಯ, ಕೆಂಭಾವಿಯೊಳಗೆ ಮೆರೆವ ಬೋಗಣ್ಣನಿಗೆ ಸಂಭ್ರಮದೊಳೆರಗಿ ನಮಿಸುವೆ ಎಂಬ ಪದಗಳು ಹೃದಯಸ್ಪರ್ಶಿಯಾಗಿವೆ.

ಮಹಾಶಕ್ತಿಸಂಪನ್ನರಾದ ಅಂಬಿಗರ ಚೌಡಯ್ಯನವರ ಮಹಿಮೆಯಿಂದ ಸರ್ಪ ಕಚ್ಚಿ ಮೃತಪಟ್ಟ ಸೈನಿಕನು ಮರುಜೀವ ಪಡೆದ. ಕ್ಷಯ, ಕುಷ್ಠರೋಗಿಗಳು ಗುಣಮುಖರಾದರು. ಅವರು ನುಡಿದ ವಾಣಿಯಿಂದ ಭಕ್ತರ ಸಕಲ ಬೇಡಿಕೆಗಳು ಈಡೇರಿದವು. ಚೌಡಯ್ಯನವರ ಪಾರಮಾರ್ಥ ಸಾಧನೆಯನ್ನು ಕಂಡು ಮಾರುಹೋದ ಗುತ್ತಲ ಅರಸನು ಅವರಿಗೆ ದಾಸೋಹಕ್ಕೆಂದು ಶಿವಪುರಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕಾಣಿಕೆಯಾಗಿ ನೀಡಿದನು. ತಮಗೆ ನೀಡಿದ ಭೂಮಿಯನ್ನು ಚೌಡಯ್ಯನವರು ತಮ್ಮ ಮಗ ಪುರವಂತ ಹಾಗೂ ಶಿವದೇವರಿಗೆ ದಾನವಾಗಿ ನೀಡಿದರು. ಅದೇ ಕಾರಣಕ್ಕಾಗಿ ಶಿವಪುರಕ್ಕೆ ಚೌಡಯ್ಯ ದಾನಪುರ ಎಂಬ ಹೆಸರು ಬಂದಿತೆಂದು ಹೇಳಲಾಗುತ್ತಿದ್ದು, ಅದೇ ಇಂದು ಚೌಡದಾನಪುರವಾಗಿದೆ. ಬಸವಣ್ಣನವರ ಗರಡಿಯಲ್ಲಿ ಪಳಗಿದ ಇವರ ಅನುಭವವು ಅಮೃತಧಾರೆಯಾಗಿ ವಚನಗಳ ರೂಪದಲ್ಲಿ ಹರಿದುಬಂದಿವೆ. ನಿಜವಾದ ಭಕ್ತನಾರು? ಎಂಬುದನ್ನು ಕುರಿತು ತಮ್ಮ ವಚನದಲ್ಲಿ
ಓಡುವಾತ ಲೆಂಕನಲ್ಲ ಬೇಡುವಾತ ಭಕ್ತನಲ್ಲ
ಓಡಲಾಗದು ಲೆಂಕನು, ಬೇಡಲಾಗದು ಭಕ್ತನು
ಓಡೆನಯ್ಯ, ಬೇಡೆನಯ್ಯ ಎಂದ ಅಂಬಿಗರ ಚೌಡಯ್ಯ
ಎಂದು ಸಾರಿದ್ದು ಅಮೋಘವಾಗಿದೆ.
ಪರಮಾತ್ಮನ ನಿಜಸ್ವರೂಪವನ್ನು ಕುರಿತು
ಅಸುರ ಮಾಲೆಗಳಿಲ್ಲ, ತ್ರಿಶೂಲ ಡಮರುಗವಿಲ್ಲ
ಬ್ರಹ್ಮಕಪಾಲವಿಲ್ಲ ಭಸ್ಮಭೂಷಣನಲ್ಲ
ವೃಷಭ ವಾಹನನಲ್ಲ, ಋಷಿಯ ಮಗಳೊಡನಿರ್ದಾತನಲ್ಲ
ಎಸಗುವ ಸಂಸಾರದ ಕುರುಹಿಲ್ಲದಾತಂಗೆ
ಹೆಸರಾವುದೆಂದಾತ ಅಂಬಿಗರ ಚೌಡಯ್ಯ
ಎಂದಿದ್ದಾರೆ. ಸ್ಥಿತಪ್ರಜ್ಞರಾದ ಅವರು ಕೊನೆಯಲ್ಲಿ ಚೌಡದಾನಪುರದ ನದಿಯ ದಡದಲ್ಲಿ ಸಮಾಧಿಸ್ಥರಾದರೆಂದು ತಿಳಿದುಬರುತ್ತದೆ. ಆದ್ದರಿಂದ ನದಿದಡದಲ್ಲಿರುವ ದಿಬ್ಬದ ಮೇಲಿರುವ ಸಮಾಧಿಯನ್ನು ಅಂಬಿಗರ ಚೌಡಯ್ಯನವರ ಸಮಾಧಿ ಎಂದು ಗುರುತಿಸಲಾಗಿದೆ. ಪ್ರತಿವರ್ಷ ಅಂಬಿಗರ ಚೌಡಯ್ಯನವರ ಜಯಂತಿಯ ನಿಮಿತ್ಯ ಸಂಕ್ರಮಣದ ಪರ್ವ ಕಾಲದಲ್ಲಿ ಬಹು ಸಡಗರ ಸಂಭ್ರಮದಿಂದ ಇಲ್ಲಿ ಜಾತ್ರಾಮಹೋತ್ಸವವು ಜರಗುತ್ತಲಿತ್ತು. ಈಗ ಪ್ರತಿವರ್ಷ ಜನವರಿ 21ರಂದು ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಗುತ್ತದೆ.

ಅಂಬಿಗರ ಚೌಡಯ್ಯ ವಚನದಲ್ಲಿ ಶಿವನ ಚಿಂತೆಯಿಂದಿರುವವರೊಬ್ಬರನು ಕಾಣೆ ಎಂಬ ವಚನ ಚಿರ ಸತ್ಯವನ್ನು ಪ್ರತಿ ಬಿಂಬಿಸುತ್ತದೆ.
ಬಡತನಕ್ಕೆ ಉಂಬುವ ಚಿಂತೆ ಉಣಲಾದರೆ ಉಡುವ ಚಿಂತೆ
ಉಡಲಾದರೆ ಇಡುವ ಚಿಂತೆ ಇಡಲಾದರೆ ಹೆಂಡಿರ ಚಿಂತೆ
ಹೆಂಡಿರಾದರೆ ಮಕ್ಕಳ ಚಿಂತೆ ಮಕ್ಕಳಾದರೆ ಬದುಕಿನ ಚಿಂತೆ
ಬದುಕಾದರೆ ಕೇಡಿನ ಚಿಂತೆ ಕೇಡಾದರೆ ಮರಣದ ಚಿಂತೆ
ಇಂತೀ ಹಲವು ಚಿಂತೆಯಲ್ಲಿ ಇಪ್ಪವರ ಕಂಡೆನು
ಶಿವನ ಚಿಂತೆಯಲ್ಲಿದ್ದವರೊಬ್ಬರನೂ ಕಾಣೆ ಎಂದಾತ  ನಮ್ಮ ಅಂಬಿಗರ ಚೌಡಯ್ಯ ನಿಜ ಶರಣನು

ಆತ, ಮುನ್ನೂರರ ಆಸುಪಾಸಿನ ಸಂಖ್ಯೆಯ ವಚನಗಳನ್ನು ಬರೆದಿದ್ದಾನೆ. ಒಂದೆರಡನ್ನು ಓದಿಕೊಳ್ಳಿ. ಆತನ ಆಶಯ, ಧಾಟಿ ನಿಮಗೆ ಅರ್ಥವಾದೀತು.
ಉಚ್ಚೆಯ ಬಚ್ಚಲಲ್ಲಿ ಹುಟ್ಟಿ, ನಾ ಹೆಚ್ಚು
ನೀ ಹೆಚ್ಚು ಎಂಬುವವರನ್ನು ಮಚ್ಚಿಲೇ ಹೊಡೆಯೆಂದಾನಂಬಿಗರ ಚೌಡಯ್ಯ
***
ಕಂತೆ ತೊಟ್ಟವ ಗುರುವಲ್ಲ
ಕಾವಿ ಹೊತ್ತವ ಜಂಗಮನಲ್ಲ
ಶೀಲ ಕಟ್ಟಿದವ ಶಿವಭಕ್ತನಲ್ಲ
ನೀರು ತೀರ್ಥವಲ್ಲ, ಕೂಳು ಪ್ರಸಾದವಲ್ಲ
ಹೌದೆಂಬವನ ಬಾಯಿ ಮೇಲೆ
ಅರ್ಧ ಮಣೆಯ ಪಾದರಕ್ಷೆಯ ತೆಗೆದುಕೊಂಡು
ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ ಟೊಕಟಕನೆ
ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ
***
ನನ್ನ ಕುಲ ಹೆಚ್ಚು, ನಿನ್ನ ಕುಲ ಕಡಿಮೆ
ಎಂದು ಹೊಡೆದಾಡುವಂತಹ ಅಣ್ಣಗಳನ್ನು
ಹಿಡಿತಂದು ಮೂಗನೆ ಸವರಿ ಮೆಣಸಿನ ಹಿಟ್ಟು
ತುಪ್ಪವ ತುಂಬಿ ನಮ್ಮ ಪಡಿಹಾರಿ ಉತ್ತಣ್ಣನ
ವಾಮ ಪಾದುಕೆಯಿಂದ ಫಡಫಡನೆ ಹೊಡೆಯಬೇಕೆಂದ
ನಮ್ಮ ಅಂಬಿಗರ ಚೌಡಯ್ಯ
***
ಮೊಲೆ ಮೂಡಿ ಬಂದರೆ ಪಿಂಡವನು ಹೆಣ್ಣೆಂಬರು
ಗಡ್ಡ ಮೀಸೆಗಳು ಬಂದರೆ ಪಿಂಡವನು ಗಂಡೆಂಬರು
ಇಬ್ಬರ ನಡುವೆ ಸುಳಿವ ಆತ್ಮ ಹೆಣ್ಣೂ ಅಲ್ಲ ಗಂಡೂ ಅಲ್ಲ
ನೋಡಿರೆಂದನಮ್ಮಂಬಿಗರ ಚೌಡಯ್ಯ
***
ಈಶ್ವರನನ್ನು ಕಾಂಬುದೊಂದಾಶೆಯುಳ್ಳೊಡೆ
ಪರದೇಶಕ್ಕೆ ಹೋಗಿ ಬಳಲದಿರು!
ಕಾಶಿಯಲ್ಲಿ ಕಾಯುವ ವಿನಾಶ ಮಾಡಬೇಡ!
ನಿನ್ನಲ್ಲಿ ನೀ ತಿಳಿದು ನೋಡಾ, ಜಗವು ನಿನ್ನೊಳಗೆಂತಾದ ಅಂಬಿಗರ ಚೌಡಯ್ಯ
***
ತಡೆನೆಲೆಯಿಲ್ಲದ ಮಹಾನದಿಯಲ್ಲಿ
ಒಡಲಿಲ್ಲದಂಬಿಗ ಬಂದಿದ್ದೇನೆ
ಹಿಡಿವ ಬಿಡುವ ಮನವ ಬೆಲೆಗೊಟ್ಟೊಡೆ
ಕಡೆ ಹಾಯಿಸುವೆ ನೀ ಮಹಾಹೊಳೆಯ
ನುಡಿಯಿಲ್ಲದ ನಿಸ್ಸೀಮ ಗ್ರಾಮದಲ್ಲಿರಿಸುವನೆಂದಾತ
ಅಂಬಿಗರ ಚೌಡಯ್ಯ
ಅಂತರಂಗದ ಬೇಗುದಿಯನ್ನು, ಕಳಕಳಿಯನ್ನು ನಿರ್ಭಿಡೆಯಿಂದ ಪ್ರಕಟಿಸಿದ ಅಂಬಿಗರ ಚೌಡಯ್ಯನ ಧಾಟಿ ಓದುಗನಿಗೆ ತೀವ್ರ ಒರಟೆನಿಸುವುದು ಸಹಜ. ಆದರೆ ಪ್ರಮುಖವಾಗಿ ನಾವು ಗಮನಿಸಬೇಕಾದ್ದು ಸಂವೇದನಾಶೀಲ ವಿಡಂಬನೆಯ ವಿಚಾರ ಸಿರಿವಂತಿಕೆ ಶತಮಾನಗಳು ಕಳೆದರೂ ಪ್ರಸ್ತುತವೇ ಆಗಿ ಉಳಿಯಬೇಕಿರುವ ಅವಶ್ಯಕತೆ.
ಮೂಲವಿವಿಧ ಆನ್ಲೈನ್ ಮೂಲಗಳಿಂದ ಕ್ರೋಢಿಕರಿಸಿ ರಚಿಸಿದ ಬರಹ

Friday, January 10, 2020

ಹರಪನಹಳ್ಳಿಯ ಭೀಮವ್ವ


ಸಂಸಾರದಲ್ಲಿದ್ದುಕೊಂಡೇ ಲೌಕಿಕ ಜಗತ್ತಿನಲ್ಲಿ ಭೌತಿಕ ಜಗತ್ತಿನಲ್ಲಿ ತನ್ನ ಎಲ್ಲಾ ಕರ್ತವ್ಯಗಳನ್ನು ಮಾಡುತ್ತಲೇ ಮುಕ್ತಿಯ ಸೋಪಾನವನ್ನು ತಾನು ಸ್ವತಃ ಏರುವುದಲ್ಲದೇ ತನ್ನಂಥ ನಾರಿಯರಿಗೆ ದಾರಿ ತೋರಿಸಿದವರಲ್ಲಿ ನಮ್ಮ ಹರಿದಾಸಿಯರಲ್ಲಿ ಪ್ರಮುಖರಾದವರು ಹೆಳವನ ಕಟ್ಟೆ ಗಿರಿಯಮ್ಮ ಹಾಗೂ ಹರಪನಹಳ್ಳಿಯ ಭೀಮವ್ವನವರು.
ಭೀಮವ್ವನವರು 1823 ಜುಲೈ 6ನೇ ತಾರೀಖು ನಾರಾಯಣ ದೇವರ ಕೆರೆ ಎಂಬ ಊರಲ್ಲಿ ನರೇಭಟ್ಟರ ವಂಶದ ರಘುನಾಥಾಚಾರ್ಯ ಮತ್ತು ರಾಘಮ್ಮ ದಂಪತಿಗಳ ಮಗಳಾಗಿ ಜನಿಸಿದರುಇವರ ಹುಟ್ಟುಹೆಸರು ಕಮಲಾಕ್ಷಿ.   ಪುಟ್ಟ ಮಗು ಅಳತೊಡಗಿದಾಗಳೆಲ್ಲಾ ತೊಟ್ಟಿಲು ತೂಗುತ್ತಾ ಹರಿನಾಮ ಹಾಡಿದರೆ ಕೂಡಲೇ ಸುಮ್ಮನಾಗುತ್ತಿತ್ತಂತೆ.

ಭೀಮವ್ವನ ನೆನಪಿನ ಶಕ್ತಿಯೂ ಘನವಾಗಿತ್ತುಹಾಗಾಗಿಯೇ  ಅವರು ಸಾವಿರಾರು ಕೀರ್ತನೆಗಳನ್ನೂ ನೂರಾರು ನುಡಿಗಳ ಕಥನ ಕೀರ್ತನೆಗಳನ್ನೂ ಬಾಯಿಯಿಂದಲೇ ನಿರರ್ಗಳವಾಗಿ ಹೇಳುತ್ತಿದ್ದರುಮಗು ಆರು ವರ್ಷದವಳಿರುವಾಗಲೇ ಆಕೆಗೆ ಶ್ರೀ ವೇದವ್ಯಾಸ ದೇವರ ದರ್ಶನವಾಗಿತ್ತುಅಂದಿನಿಂದಲೇ ಅವಳಲ್ಲಿ ಗುರುತರ ಬದಲಾವಣೆ ಕಾಣಿಸಿಕೊಂಡಿತ್ತುಈಕೆಗೆ 11 ವರ್ಷವಾದಾಗ ರಾಯದುರ್ಗ ತಾಲೂಕಿನ ಹರೇ ಸಮುದ್ರ ಗ್ರಾಮದ ಗೋಪಾಲಪ್ಪ ಎಂಬುವರ ವಂಶದ ಮುನಿಯಪ್ಪನವರ ಜೊತೆ ಮದುವೆಯಾಯಿತುವರನ ವಯಸ್ಸು 45 ವರ್ಷಅವರಿಗೆ ಇದು ಮೂರನೆಯ ಮದುವೆಮದುವೆಯಾದ 14 ವರ್ಷಕ್ಕೆ ಇವರಿಗೆ ಒಬ್ಬ ಮಗ ಹಾಗೂ ನಾಲ್ಕು ವರ್ಷಗಳ ನಂತರ ಮಗಳೂ ಜನಿಸಿದರುಇವರ 35ನೇ ವರ್ಷಕ್ಕೆ ಪತಿ ವಿಯೋಗವಾಯಿತು.

ಇಲ್ಲಿಂದ ಇವರ ಜೀವನ ಮಾರ್ಗ ಬದಲಾಯಿತುಒಂದು ದಿನ ಮಧ್ಯಾಹ್ನ ಮಲಗಿದಾಗ ಕನಸಿನಲ್ಲಿ ಒಂದು ಮಹಾ ಅರಣ್ಯದಲ್ಲಿ ಇವರು ಒಂದು ಮರದ ಕೆಳಗೆ ಮಲಗಿದ್ದಾರೆಆಗ ಒಬ್ಬ ತಂಬೂರಿ ಹಿಡಿದ ಮುನಿ (ನಾರದರು) ಒಂದು ಕೃಷ್ಣ ಸರ್ಪದೊಡನೆ ಬಂದಿದ್ದ ಸರ್ಪಕ್ಕೆ ಈಕೆಯ ನಾಲಿಗೆಯ ಮೇಲೆ ಮೂರಕ್ಷರ ಬರೆಯಲು ಹೇಳಿದ್ದ ನಂತರವೇ ಇವರು ಕೀರ್ತನೆಗಳನ್ನು ರಚಿಸಲು ಪ್ರಾರಂಭಿಸಿದ್ದು.

ಇವರ ಮೊದಲ ಹಾಡುರಕ್ಷಿಸಬೇಕೆನ್ನ ಲಕ್ಷ್ಮೀನರಸಿಂಹನ ಭಕ್ತನೇಎಂಬುದುಮೊದಲೆಲ್ಲಾ ಇವರು ತಮಗೆ ಬಂದ ಹಾಡುಗಳನ್ನು ಪ್ರಕಟಪಡಿಸಿರಲಿಲ್ಲಇದರಿಂದಾಗಿ ಹೊಟ್ಟೆನೋವು, ತಲೆನೋವುಗಳನ್ನು ಅನುಭವಿಸಬೇಕಾಯಿತುಅಲ್ಲದೆ ಮುನಿಯು ಪದೇ ಪದೇ ಸ್ವಪ್ನದಲ್ಲಿ ಕಾಣಿಸಿಕೊಂಡುನಾನು ಹೇಳಿಕೊಟ್ಟ ಮಂತ್ರವನ್ನೇಕೆ ಹೇಳುತ್ತಿಲ್ಲ?’ ಎಂದು ಗದರತೊಡಗಿದ್ದಸ್ವಪ್ನದಲ್ಲಿ ಬಂದಾಗ ಈಕೆ ಅದೇ ಮುನಿಯನ್ನು ತನ್ನ ಹಾಡುಗಳಿಗೆ ಮುದ್ರಿಕೆಯನ್ನು ಸೂಚಿಸಲು ಹೇಳಿದಾಗ ಆತನೇಭೀಮೇಶಕೃಷ್ಣಎಂದು ಬಳಸಲು ಸಲಹೆಯಿತ್ತನಂತೆ.    ಮುಂದೆ ಕೂಡಾ ಇವರು ಅನೇಕ ಹಾಡುಗಳನ್ನು ರಚಿಸಿದರೂ ತನ್ನನ್ನು ಜನ ಆಡಿಕೊಂಡು ನಕ್ಕಾರೆಂಬ ಹೆದರಿಕೆಯಿಂದ ಸುಮ್ಮನೆ ಇದ್ದಾಗ, ಇವರ ತಮ್ಮನ ಹೆಂಡತಿಯ ಕನಸಿನಲ್ಲಿ ಬಂದ ಮುನಿಯು ವಿಷಯವನ್ನು ಹೇಳಿದನಂತೆಅಂದಿನಿಂದ ಇವರು ತಮ್ಮ ಕೀರ್ತನೆಗಳನ್ನು ಪ್ರಚಾರಗೊಳಿಸಿದರಂತೆಮುಂದೆ ಇವರು ಕನಸಿನಲ್ಲಿ ಕಂಡುದೆಲ್ಲವೂ ಕೀರ್ತನೆಹಾಡುಗಳ ರೂಪದಲ್ಲಿ ಬರತೊಡಗಿದವುಗೋಪಿಕಾಸ್ತ್ರೀಯರು ಉದ್ಧವನೆದುರು ಮಾಡಿದ ಪ್ರಲಾಪ, ಮುಯ್ಯದ ಹಾಡು, ಸುಭದ್ರಾ ಕಲ್ಯಾಣ, ರತಿ ಕಲ್ಯಾಣ, ನಳಚರಿತ್ರೆ, ಸತ್ಯಭಾಮೆಯುಪತಿದಾನ ಕೊಟ್ಟ ಹಾಡುಮುಂತಾದ ದೊಡ್ಡ ಕೀರ್ತನೆಗಳನ್ನಲ್ಲದೆ ಸಣ್ಣ ಪುಟ್ಟ ಕೀರ್ತನೆಗಳನ್ನೂ ಇವರು ಮೂಡಿಸಿದರುಇವರು ಕ್ರಿ. .  1903ನೇ ಜನವರಿ ತಿಂಗಳ 11ನೇ ತಾರೀಖು ಅಂದರೆ ಪುಷ್ಯ ಶುದ್ಧ 13, ಮುಕ್ಕೋಟಿ ದ್ವಾದಶಿಯ ದಿನ ಮಧ್ಯಾಹ್ನದಲ್ಲಿ ನಿಧನರಾದರು.

ಕೀರ್ತನೆ, ಸುಳಾದಿ, ಉಗಾಭೋಗ ಹೀಗೆ ಮೂರು ಪ್ರಕಾರಗಳಲ್ಲಿಯೂ ಭೀಮವ್ವನರು ಕೃತಿ ರಚನೆ ಮಾಡಿದ್ದು, 143 ಸಣ್ಣ ಕೀರ್ತನೆಗಳನ್ನೂ, 193 ದೊಡ್ಡ ಕೀರ್ತನೆಗಳನ್ನೂ  ರಚಿಸಿದ್ದಾರೆಇನ್ನೂ ಒಂದು ಆಶ್ಚರ್ಯದ ಸಂಗತಿ ಎಂದರೆ ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಶ್ರಾವಣ ಮಾಸದಲ್ಲಿಯ ಶುಕ್ರವಾರ ಹಾಗೂ ಶನಿವಾರಗಳಂದು ಲಕ್ಷ್ಮೀದೇವಿಯನ್ನು ಗಡಿಗೆಯ ರೂಪದಲ್ಲಿ ಕೂಡ್ರಿಸಿ ಪೂಜಿಸುವಾಗ ಹಾಡುಗಳು, ಮಂಗಳಗೌರಿಯ ಹಾಡುಗಳು, ಅಲ್ಲದೆ ಜಲಕ್ರೀಡೆ ಹಾಡುಗಳು ಇತ್ಯಾದಿ ಕಥನ, ಕವನಗಳೆಲ್ಲವೂ ಭೀಮವ್ವನವರಿಂದ ರಚಿತಗೊಂಡಿವೆಇವರ ಕಥಾ ವಸ್ತುಗಳು ಸಾಮಾನ್ಯವಾಗಿ ರಾಮಾಯಣ, ಮಹಾಭಾರತ, ಭಾಗವತದ ಘಟನೆಗಳೇ ಆಗಿವೆದ್ರೌಪದಿ ವಸ್ತ್ರಾಪಹರಣದ ಸಮಯದ ಸೀರೆಗಳ ವರ್ಣನೆ, ಇತರ ಕಾವ್ಯಗಳಲ್ಲಿಯ ಆಭರಣಗಳು, ಭಕ್ಷ್ಯ ಭೋಜನಗಳ ವರ್ಣನೆ ಮುಂತಾದವು ತುಂಬಾ ಸುಂದರವಾಗಿವೆ.

ಹೆಣ್ಣಿಗೆ ಮುತ್ತೈದೆತನ, ಸಂತಾನ ಪ್ರಾಪ್ತಿ ಇವುಗಳ ಮಹತ್ವವನ್ನು ತೋರುವ ಮನೋಭಾವ ಭೀಮವ್ವನವರ  ಕಾವ್ಯಗಳಲ್ಲಿ ಎದ್ದು ಕಾಣುತ್ತದೆಹಸೆಗೆ ಕರೆಯುವ ಆರತಿಯ ಹಾಡು, ಉರುಟಣೆಯ ಹಾಡು ಇತ್ಯಾದಿ ಸಂಪ್ರದಾಯದ ಹಾಡುಗಳನ್ನೂ ಭೀಮವ್ವನವರು ರಚಿಸಿದ್ದಾರೆಅಷ್ಟೇ ಅಲ್ಲದೆ, ಮಧ್ವಮತದ ತತ್ವಗಳೂ ಅವರ ಕೀರ್ತನೆಗಳಲ್ಲಿ ಕಂಡುಬರುತ್ತವೆಪಂಚವಿಧ ಭಾವಗಳಾದ ದಾಸ್ಯ, ಸಖ್ಯ, ಮಧುರ, ವಾತ್ಸಲ್ಯ ಹಾಗೂ ಶಾಂತ ಇವುಗಳಿಂದ ಇವರು ಭಗವಂತನನ್ನು ಸ್ತುತಿಸಿದ್ದಾರೆ.

ಭೀಮವ್ವನವರ  ಕಾವ್ಯಗಳಲ್ಲಿಯ ಸಂಭಾಷಣಾ ತಂತ್ರದ ವೈಶಿಷ್ಟ್ಯವನ್ನು ನೋಡಬೇಕೆಂದರೆ ಸತ್ಯಭಾಮೆ, ಪಾರ್ವತಿಸತ್ಯಭಾಮೆ ರುಕ್ಮಿಣಿ ಸಂವಾದದಲ್ಲಿ ನೋಡಬಹುದುರುಕ್ಮಿಣಿ ತಾನು ಪಟ್ಟದ ರಾಣಿ, ಸತ್ಯಭಾಮೆ ಮೆಚ್ಚಿ ಬಂದವಳು ಎಂದು ಮೂದಲಿಸಿದರೆಸತ್ಯಭಾಮೆಯು, ತಂದೆ ತಾಯಿ ಅಣ್ಣಂದಿರನ್ನು ವಂಚಿಸಿ ಪತ್ರಬರೆದು ಒಲಿಸಿಕೊಂಡು ಓಡಿಬಂದವಳು ಎಂದು ಹಳಿಯುತ್ತಾಳೆ ರೀತಿ ಕಥೆಯನ್ನು ಪಾತ್ರಗಳ ಬಾಯಿಂದಲೇ ಹೇಳಿಸುವ ರೀತಿ ಅನನ್ಯವಾದದ್ದು. ಅಸಾಮಾನ್ಯ ಗ್ರಹಣಶಕ್ತಿ, ಸ್ಮರಣಶಕ್ತಿ, ಧಾರಣ ಹಾಗೂ ಪ್ರತಿಭೆ ಮೆಚ್ಚುವಂತಹದುಇವರಿಗೆಅವ್ವನವರೂಎಂದೂ ಹೇಳುತ್ತಾರೆ.

ಮಾಹಿತಿ ಕೃಪೆ: ಮಾಲತಿ ಮುದಕವಿ ಅವರ 'ಕರ್ಮವೀರ'ದಲ್ಲಿ ಮೂಡಿಬಂದಿದ್ದ ಬರಹ

ಪುತ್ತೂರ್ ಅಜ್ಜ

  ರಾಮಚಂದ್ರ ಭಟ್ರವರ ಹೆತ್ತವರು   ರಾಮೇಶ್ವರಕ್ಕೆ ತೀರ್ಥಯಾತ್ರೆಗೆ ತೆರಳಿ ಬಂದ   ತರುವಾಯ 1916 ರ ಜೂನ್ 15 ರಂದು ನೆಟ್ಟಾರಿನಲ್ಲಿ   ರಾಮಚಂದ್ರರ ಜನನವಾಯಿತು ...